ವಾಯುಭಾರ ಕುಸಿತ: ಹಗುರ ಮಳೆ ಸಾಧ್ಯತೆ

Update: 2018-11-21 16:59 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ನ. 20: ಬಂಗಾಲ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಇಂದು ರಾತ್ರಿ ಮತ್ತು ನಾಳೆ ಸಾಧಾರಣ ಮಳೆ ಬೀಳುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ವಾಯುಭಾರ ಕುಸಿತದಿಂದ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿಲ್ಲ. ಹಿಂಗಾರು ಕೂಡ ಚೇತರಿಕೆ ಕಾಣುತ್ತಿಲ್ಲ. ಹೀಗಾಗಿ ರಾಜ್ಯದಲ್ಲಿ ಉತ್ತಮ ಮಳೆ ಬೀಳುವ ಸಂಭವವಿದೆ ಎಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶನ ಶ್ರೀನಿವಾಸ ರೆಡ್ಡಿ ಹೇಳಿದ್ದಾರೆ.

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ನಾಳೆ ಮಳೆ ಬೀಳುವ ಸಾಧ್ಯತೆಗಳಿವೆ. ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ.

ವಾಯುಭಾರ ಕುಸಿದ ಪರಿಣಾಮ ನಾಳೆಯೂ ಬೆಂಗಳೂರು ಸೇರಿದಂತೆ ವಿವಿಧೆಡೆ ಮೋಡ ಕವಿದ ವಾತಾವರಣ ಹಾಗೂ ಮೇಲ್ಮೈ ತಂಪಾದ ಗಾಳಿ ಬೀಸುವ ಸಾಧ್ಯತೆ ಇದೆ. ಅಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News