ರೈತ ಮಹಿಳೆಯ ಬಗ್ಗೆ ಹಗುರವಾಗಿ ಮಾತನಾಡಿದ ಆರೋಪ: ಸಿಎಂ ವಿರುದ್ಧ ದೂರು

Update: 2018-11-22 05:52 GMT

ಬೆಂಗಳೂರು, ನ. 22: ರೈತ ಮಹಿಳೆಯ ಕುರಿತು ಹಗುರವಾಗಿ ಮಾತನಾಡಿರುವ ಆರೋಪದಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ಕಾರ್ಮಿಕ ಕಲ್ಯಾಣ ಪ್ರತಿಷ್ಠಾನದ ಅಧ್ಯಕ್ಷ ಮಲ್ಲಿಕಾರ್ಜುನ್‌ ಎಂಬುವರು ಪೊಲೀಸ್‌ ಮಹಾ ನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ವಿರುದ್ಧ ಆನ್‌ಲೈನ್‌ ಮೂಲಕ ಪೊಲೀಸ್‌ ಮಹಾ ನಿರ್ದೇಶಕರು, ಕರ್ನಾಟಕ ಮಹಿಳಾ ಆಯೋಗ ಹಾಗೂ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಲಾಗಿದ್ದು, ಕೂಡಲೇ ಸಿಎಂ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ.

''ಮುಖ್ಯಮಂತ್ರಿ ಕುಮಾರಸ್ವಾಮಿ ರೈತ ಮಹಿಳೆಯನ್ನು ಅವಮಾನಕರವಾಗಿ ನಿಂದಿಸಿರುವುದು, ಇಡೀ ರೈತರಿಗೆ ಮಾಡಿದ ಅಪಮಾನವಾಗಿದೆ. ನಮ್ಮ ಮನವಿ ಪರಿಗಣಿಸಿ ಮುಖ್ಯಮಂತ್ರಿ ವಿರುದ್ಧ ಕ್ರಮ ಕೈಗೊಳ್ಳಬೇಕು'' ಎಂದು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News