ನ. 24ರಿಂದ ಅಖಿಲ ಭಾರತ ಅಂತರ್ ವಿಶ್ವ ವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್

Update: 2018-11-22 07:22 GMT

ಮಂಗಳೂರು, ನ. 22: 79 ನೇ ಅಖಿಲ ಭಾರತ ಅಂತರ್ ವಿಶ್ವ ವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2018 ಅನ್ನು  ನ. 24ರಿಂದ28ರ ವರೆಗೆ ಆಳ್ವಾಸ್ ಕಾಲೇಜಿನ ಸಹಯೋಗದೊಂದಿಗೆ ಮೂಡುಬಿದಿರೆಯ ಸ್ವರಾಜ್ ಮೈದಾನದಲ್ಲಿ ನಡೆಸಲಾಗುವುದು ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಮೋಹನ್ ಆಳ್ವ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮಂಗಳೂರು ವಿಶ್ವ ವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಕಿಶೋರ್ ಕುಮಾರ್, ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ  ಡಾ. ಪಿ. ಈಶ್ವರ್, ಮಾಜಿ ಸಚಿವರಾದ ಅಭಯಚಂದ್ರ ಜೈನ್ ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News