ನ.24ರಂದು ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ
ಬೆಂಗಳೂರು, ನ.22: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2017ನೆ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ.24ರ ಸಂಜೆ 6ಕ್ಕೆ ಡಾ.ಬಾಬು ರಾಜೇಂದ್ರ ಪ್ರಸಾದ್ ರಾಷ್ಟ್ರೀಯ ಸಮಾವೇಶ ಭವನ, ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ) ಆವರಣದಲ್ಲಿ ಏರ್ಪಡಿಸಲಾಗಿದೆ.
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪ್ರಶಸ್ತಿ ಪ್ರದಾನವನ್ನು ಮಾಡುವರು. ಸಮಾರಂಭದ ಗೌರವ ಉಪಸ್ಥಿತಿಯನ್ನು ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಡಿ.ವಿ. ಸದಾನಂದಗೌಡ, ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ವಹಿಸಲಿದ್ದಾರೆ.
ಸಮಾರಂಭದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಕೆ.ಜೆ.ಜಾರ್ಜ್, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಝಮೀರ್ ಅಹ್ಮದ್ ಖಾನ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಡಾ.ಜಯಮಾಲಾ, ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್, ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ನಾಗತಿಹಳ್ಳಿ ಚಂದ್ರಶೇಖರ್ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಚಿನ್ನೇಗೌಡ ಉಪಸ್ಥಿತರಿರುವರು.