×
Ad

ಚುನಾಯಿತ ಮಹಿಳಾ ಸದಸ್ಯರ ಸಾಮರ್ಥ್ಯಾಭಿವೃದ್ಧಿ ಸಮಾರೋಪ

Update: 2018-11-22 22:01 IST

ಮಂಗಳೂರು, ನ. 22: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಸಹಯೋಗದಲ್ಲಿ ರಾಷ್ಟೀಯ ಜನ ಸಹಕಾರಿ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ ನವದೆಹಲಿ, ಅಬ್ದುಲ್ ನಜೀರ್‌ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಮೈಸೂರು ಆಶ್ರಯದಲ್ಲಿ ಗ್ರಾಮ ಪಂಚಾಯತ್‌ಗಳ ಚುನಾಯಿತ ಮಹಿಳಾ ಸದಸ್ಯರ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ವಾಮಂಜೂರಿನ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಿತು.

ದ.ಕ. ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ ಪ್ರಮಾಣಪತ್ರ ವಿತರಿಸಿ ಮಾತನಾಡಿ, ಜನರ ಸೇವೆ ಮಾಡಲು ಜನಪ್ರತಿನಿಧಿಗಳಿಗೆ 5 ವರ್ಷ ಅವಕಾಶವಿದ್ದು, ಈ ಅವಧಿಯಲ್ಲಿ ಕ್ರಿಯಾಶೀಲರಾಗಿ ಕರ್ತವ್ಯ ನಿರ್ವಹಿಸಲು ಸಾಮರ್ಥ್ಯಾಭಿವೃದ್ಧಿ ತರಬೇತಿ ಉಪಯುಕ್ತವಾಗಿದೆ. ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮಹಿಳಾ ಪ್ರತಿನಿಧಿಗಳು ತಮ್ಮ ಸಾಮರ್ಥವನ್ನು ಹೆಚ್ಚಿಸಿಕೊಂಡು ಗ್ರಾಮದ ಅಭಿವೃದ್ಧಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಶುಭ ಹಾರೈಸಿದರು.

ತರಬೇತಿ ಸಂಯೋಜಕಿ ಹಾಗೂ ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ಯಾಮಲಾ ಸಿ.ಕೆ. ಮಾತನಾಡಿ, ತರಬೇತಿಯಲ್ಲಿ ಪಡೆದ ಮಾಹಿತಿಯನ್ನು ಇತರರಿಗೆ ತಿಳಿಸುವುದರ ಜೊತೆಗೆ ತಮ್ಮ ಗ್ರಾಮ ಅಭಿವೃದ್ಧಿಗೆ ಅಳವಡಿಸಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೋಭಾ ಪಿ., ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಭಾರತಿ ಕೆ. ಉಪಸ್ಥಿತರಿದ್ದರು. ಮೇಲ್ವಿಚಾರಕಿ ಶಾರದಾ ಕೆ. ಕಾರ್ಯಕ್ರಮ ನಿರೂಪಿಸಿದರು. ಮಾಲಿನಿ ಸ್ವಾಗತಿಸಿದರು. ತರಬೇತಿಯಲ್ಲಿ ಮಂಗಳೂರು, ಸುಳ್ಳ, ಬೆಳ್ತಂಗಡಿ, ಬಂಟ್ಟಾಳ, ಪುತ್ತೂರು 5 ತಾಲೂಕು ವ್ಯಾಪ್ತಿಯ 35 ಗ್ರಾಮ ಪಂಚಾಯತ್‌ನ ತಲಾ ಓರ್ವ ಸದಸ್ಯರಂತೆ ಅಧ್ಯಕ್ಷರು/ಉಪಾಧ್ಯಕ್ಷರು/ಸದಸ್ಯರು ತರಬೇತಿಯಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News