ಎಸೆಸೆಲ್ಸಿ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

Update: 2018-11-22 16:45 GMT

ಬೆಂಗಳೂರು, ನ.22: ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಶೇ.60 ರಿಂದ 74.99 ಹಾಗೂ ಶೇ.75 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರು ಮಾಡುವ ಕುರಿತು ಶಿಕ್ಷಣ ಇಲಾಖಾ ವತಿಯಿಂದ ಮಂಜೂರಾತಿ ಮಾಡುವ ಬದಲಿಗೆ ಸಮಾಜ ಕಲ್ಯಾಣಾ ಇಲಾಖೆ ವತಿಯಿಂದ ಈ ಯೋಜನೆಯನ್ನು 2018-19ನೆ ಸಾಲಿನಿಂದ ಅನುಷ್ಠಾನಗೊಳಿಸಲಾಗುತ್ತಿದೆ.

ವಿದ್ಯಾರ್ಥಿಗಳು ಈ ಯೋಜನೆಯ ಸೌಲಭ್ಯ ಪಡೆಯುವ ಸಲುವಾಗಿ ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ ವಿಳಾಸ www.sw.kar.nic.in ದಲ್ಲಿ ಅರ್ಜಿಗಳನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಅರ್ಜಿ ನೋಂದಣಿ ಮಾಡಲು ಡಿ. 15 ಕೊನೆಯ ದಿನವಾಗಿರುತ್ತದೆ ಎಂದು ಸಮಾಜ ಕಲ್ಯಾಣ ಇಲಾಖಾ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News