ನೆಲ್ಯಾಡಿ: ಟ್ಯಾಂಕರ್ ಢಿಕ್ಕಿ - ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Update: 2018-11-23 12:04 GMT

ಪುತ್ತೂರು, ನ. 23: ಕೊನಾಲು ಗ್ರಾಮದ ಆರ್ಲ ಎಂಬಲ್ಲಿ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.

ಮೃತರನ್ನು ಕೊನಾಲು ಗ್ರಾಮದ ಕಡೆಂಬಿಲ ನಿವಾಸಿ ಜಗದೀಶ್ (44) ಎಂದು ಗುರುತಿಸಲಾಗಿದೆ.

ಟ್ಯಾಂಕರ್ ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ ಎನ್ನಲಾಗಿದ್ದು, ಘಟನೆಯಿಂದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News