ಅಪರಿಚಿತ ವಾಹನ ಢಿಕ್ಕಿ: ಪಾದಾಚಾರಿ ಮೃತ್ಯು

Update: 2018-11-24 17:12 GMT

ಕೋಟ, ನ.24: ಕೋಟ ವಿವೇಕ ಹೈಸ್ಕೂಲ್ ಬಳಿ ನ.24ರಂದು ಬೆಳಗಿನ ಜಾವಾ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 66ರ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಗಿಳಿಯಾರು ಗ್ರಾಮದ ಹಾಡಿಕೆರೆ ನಿವಾಸಿ ಸುರೇಶ್ ಪೂಜಾರಿ ಎಂದು ಗುರುತಿಸಲಾಗಿದೆ. ಇವರು ಸಾಸ್ತಾನದಲ್ಲಿ ಯಕ್ಷಗಾನ ಬಯಲಾಟವನ್ನು ನೋಡಿ ವಾಪಾಸು ಮನೆಗೆ ಬರುತ್ತಿರುವಾಗ ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ ಎನ್ನಲಾಗಿದೆ. ಇದರ ಪರಿಣಾಮ ಗಂಭೀರವಾಗಿ ಗಾಯ ಗೊಂಡ ಸುರೇಶ್ ಪೂಜಾರಿ ಸ್ಥಳದಲ್ಲೇ ಮೃತಪಟ್ಟರು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News