×
Ad

ಹನೂರು: ಗಾಂಜಾ ಬೆಳೆದಿದ್ದ ವ್ಯಕ್ತಿಯ ಬಂಧನ

Update: 2018-11-25 00:34 IST

ಹನೂರು,ನ.24: ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿರ್ಯೋವನನ್ನು ರಾಮಾಪುರ ಪೋಲಿಸರು ಮಾಲು ಸಮೇತ ವಶಕ್ಕೆ ಪಡೆದು, ಪ್ರಕರಣ ದಾಖಲಿಸಿ  ನ್ಯಾಯಾಲಯಕ್ಕೆ ಹಾಜರು ಪಡಿಸಿರುವ ಘಟನೆ ಶನಿವಾರ ನಡೆದಿದೆ.

ಹನೂರು ತಾಲೂಕಿನ ಶೆಟ್ಟಳ್ಳಿ ಗ್ರಾಮದ ಕುಳ್ಳಶೆಟ್ಟಿ (70) ಬಂಧಿತ ಆರೋಪಿ.

ಶೆಟ್ಟಳ್ಳಿ ಗ್ರಾಮದ ಕುಳ್ಳಶೆಟ್ಟಿ ಅಕ್ರಮವಾಗಿ ಗಾಂಜಾ ಬೆಳೆದಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ಉಪವಿಭಾಗ ಡಿವೈಎಸ್‍ಪಿ ಪುಟ್ಟಮಾದಯ್ಯ ಮಾರ್ಗದರ್ಶನದಲ್ಲಿ ರಾಮಾಪುರ ವೃತ್ತ ನಿರೀಕ್ಷಕ ಮನೋಜ್ ಕುಮಾರ್ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ 5.460 ಕೆಜಿ ತೂಕದ ಗಾಂಜಾವನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News