ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ
Update: 2018-11-25 08:59 IST
ಬೆಂಗಳೂರು, ನ.25: ಮಾಜಿ ಸಚಿವ, ಹಿರಿಯ ಚಲನಚಿತ್ರ ನಟ ಅಂಬರೀಶ್ ಪಾರ್ಥೀವ ಶರೀರದ ಅಂತ್ಯಕ್ರಿಯೆ ಸೋಮವಾರ (ನ.26) ಕಂಠೀರವ ಸ್ಟುಡಿಯೋದಲ್ಲಿ ಜರುಗಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಕಂಠೀರವ ಸ್ಟುಡಿಯೋದಲ್ಲಿರುವ ರಾಜ್ ಕುಮಾರ್ ಸಮಾಧಿ ಸ್ಮಾರಕದ ಬಳಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.
ಇಂದು ಇಡೀ ದಿನ ಪಾರ್ಥೀವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಇರಿಸಲಾಗುತ್ತಿದೆ. ಅಂತಿಮ ದರ್ಶನಕ್ಕೆ ಆಗಮಿಸಲು ಮಂಡ್ಯ ಜಿಲ್ಲೆಯಿಂದ ವಿಶೇಷ ಸಾರಿಗೆ ಬಸ್ ವ್ಯವಸ್ಥೆಗೊಳಿಸಲಾಗಿದೆ.
ಅಂಬರೀಶ್ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.