ಮಂಡ್ಯಕ್ಕೆ ಅಂಬರೀಶ್ ಪ್ರಾರ್ಥಿವ ಶರೀರವನ್ನು ಹೆಲಿಕಾಪ್ಟರ್ ಮೂಲಕ ರವಾನಿಸಲು ರಕ್ಷಣಾ ಇಲಾಖೆ ಗ್ರೀನ್ ಸಿಗ್ನಲ್
Update: 2018-11-25 11:42 IST
ಬೆಂಗಳೂರು, ನ.25: ಅಗಲಿದ ನಟ , ಮಾಜಿ ಸಚಿವ ಅಂಬರೀಶ್ ಪಾರ್ಥಿವ ಶರೀರವನ್ನು ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕಾಗಿ ಹೆಲಿಕಾಪ್ಟರ್ ಮೂಲಕ ಮಂಡ್ಯಕ್ಕೆ ರವಾನಿಸಲು ಕೇಂದ್ರ ರಕ್ಷಣಾ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ.
ಅಂಬರೀಶ್ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ಕೊಂಡೊಯ್ಯಲು ರಕ್ಷಣಾ ಇಲಾಖೆಯ ಹೆಲಿಕಾಪ್ಟರ್ ಒದಗಿಸುವಂತೆ ಮುಖ್ಯ ಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿರುವ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಕ್ಷಣಾ ಇಲಾಖೆಯ ಹೆಲಿಕಾಪ್ಟರ್ ಬಳಸಲು ಅನುಮತಿ ನೀಡಿದ್ದಾರೆ.
ಅಂಬರೀಶ್ ಪಾರ್ಥಿವ ಶರೀರದ ಏರ್ ಲಿಫ್ಟ್ ಗೆ ರಕ್ಷಣಾ ಸಚಿವರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಂಜೆ 4 ಗಂಟೆಗೆ ಕಂಟೀರವ ಸ್ಟೇಡಿಯಂನಿಂದ ಮಂಡ್ಯಕ್ಕೆ ಹೆಲಿಕಾಪ್ಟರ್ ನಲ್ಲಿ ಅಂಬರೀಶ್ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುವುದು ಎಂದು ಮುಖ್ಯ ಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.