ಜಾಫರ್ ಶರೀಫ್ ನಿಧನಕ್ಕೆ ಸಚಿವ ಯು.ಟಿ.ಖಾದರ್ ಸಂತಾಪ

Update: 2018-11-25 10:26 GMT

ಮಂಗಳೂರು, ನ.25: ಹಿರಿಯ ರಾಜಕೀಯ ಮುತ್ಸದ್ದಿ, ಕೇಂದ್ರ ಮಾಜಿ ಸಚಿವ ಸಿ.ಕೆ.ಜಾಫರ್ ಶರೀಫ್ ಅವರ ನಿಧನಕ್ಕೆ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.

  ಕೇಂದ್ರ ರೈಲ್ವೆ ಸಚಿವರಾಗಿ ರಾಜ್ಯಕ್ಕೆ ಮಾತ್ರವಲ್ಲದೆ ಇಡೀ ಭಾರತ ದೇಶದ ರೈಲ್ವೆ ಅಭಿವೃದ್ಧಿ ಹಾಗೂ ಸುಧಾರಣೆಗೆ ಅವರು ಅಪಾರ ಕಾಣಿಕೆ ನೀಡಿದ್ದರು. ಶರೀಫ್ ಅವರ ನಿಧನದಿಂದ  ಪಕ್ಷಕ್ಕೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಚಿವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News