×
Ad

ಮೂರನೇ ಟ್ವೆಂಟಿ-20: ಭಾರತಕ್ಕೆ ಭರ್ಜರಿ ಜಯ

Update: 2018-11-25 17:07 IST

ಸಿಡ್ನಿ, ನ.25: ಆಸ್ಟ್ರೇಲಿಯ ವಿರುದ್ಧ ಮೂರನೇ ಹಾಗೂ ಅಂತಿಮ ಟ್ವೆಂಟಿ-2- ಅಂತರ್‌ರಾಷ್ಟ್ರೀಯ ಪಂದ್ಯದಲ್ಲಿ ರವಿವಾರ ಭಾರತ ತಂಡ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು 1-1 ರಿಂದ ಸಮಬಲಗೊಳಿಸಿದೆ.

ಮಳೆಬಾಧಿತ ಮೊದಲ ಪಂದ್ಯವನ್ನು ಆಸ್ಟ್ರೇಲಿಯ ಗೆದ್ದುಕೊಂಡರೆ, ಎರಡನೇ ಪಂದ್ಯ ಮಳೆಗಾಹುತಿಯಾಗಿತ್ತು.

ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 164 ರನ್ ಗಳಿಸಿದೆ. ಗೆಲ್ಲಲು ಸವಾಲಿನ ಮೊತ್ತ ಪಡೆದ ಭಾರತ 19.4 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 168 ರನ್ ಗಳಿಸಿದೆ. ನಾಯಕ ವಿರಾಟ್ ಕೊಹ್ಲಿ(ಔಟಾಗದೆ 61,41 ಎಸೆತ, 4 ಬೌಂಡರಿ,2 ಸಿಕ್ಸರ್)ಹಾಗೂ ದಿನೇಶ್ ಕಾರ್ತಿಕ್(ಔಟಾಗದೆ 22,18 ಎಸೆತ, 1 ಬೌಂಡರಿ, 1 ಸಿಕ್ಸರ್)5ನೇ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 60 ರನ್ ಜೊತೆಯಾಟ ನಡೆಸಿದರು.

ಅಗ್ರ ಕ್ರಮಾಂಕದಲ್ಲಿ ಶಿಖರ್ ಧವನ್(41), ರೋಹಿತ್ ಶರ್ಮಾ(23) ಎರಡಂಕೆಯ ಸ್ಕೋರ್ ಗಳಿಸಿದರು.

ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯ ಪರ ಆರಂಭಿಕ ಆಟಗಾರ ಡಿಶಾರ್ಟ್ 33 ರನ್ ಗಳಿಸಿದರು. ಸ್ಟೋನಿಸ್ ಔಟಾಗದೆ 25 ರನ್ ಗಳಿಸಿದರು. ಭಾರತದ ಪರ ಕೃನಾಲ್ ಪಾಂಡ್ಯ 36 ರನ್‌ಗೆ 4 ವಿಕೆಟ್ ಕಬಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News