×
Ad

ಜಾಫರ್ ಶರೀಫ್ ನಿಧನ: ರಾಜ್ಯಾದ್ಯಂತ ಮೂರು ದಿನ ಶೋಕಾಚರಣೆ

Update: 2018-11-25 17:42 IST

ಬೆಂಗಳೂರು, ನ. 25: ಕೇಂದ್ರದ ಮಾಜಿ ಸಚಿವ ಸಿ.ಕೆ.ಜಾಫರ್ ಶರೀಫ್ ಅವರ ನಿಧನದ ಹಿನ್ನೆಲೆಯಲ್ಲಿ ನ.25ರಿಂದ ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕವನ್ನು ಆಚರಿಸಲಾಗುವುದು ಎಂದು ರಾಜ್ಯ ಸರಕಾರ ಘೋಷಿಸಿದೆ.

ಈ ಅವಧಿಯಲ್ಲಿ ಯಾವುದೇ ಅಧಿಕೃಯ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ ಹಾಗೂ ನಿಯಮಿತವಾಗಿ ರಾಷ್ಟ್ರಧ್ವಜವನ್ನು ಹಾರಿಸಲ್ಪಡುವ ಸರಕಾರದ ಎಲ್ಲ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಎಂದು ತಿಳಿಸಲಾಗಿದೆ. ಅಲ್ಲದೆ, ಮೃತರ ಅಂತ್ಯಕ್ರಿಯೆಯನ್ನು ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿಸುವಂತೆ ಆದೇಶಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News