ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಲು ಪ್ರಧಾನಿ ದೃಢ ನಿರ್ಧಾರ ಮಾಡಬೇಕು : ಪೇಜಾವರ ಶ್ರೀ
Update: 2018-11-25 18:15 IST
ಮಂಗಳೂರು, ನ. 25: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಲು ಪ್ರಧಾನಿ ದೃಢ ನಿರ್ಧಾರ ಮಾಡಬೇಕು. ರಾಮಮಂದಿರ ನಿರ್ಮಾಣಕ್ಕಾಗಿ ಅಗತ್ಯ ಬಿದ್ದರೆ ಸಂಸತ್ ಬಿಜೆಪಿ ಸದಸ್ಯರು ರಾಜೀನಾಮೆ ನೀಡಲೂ ಸಿದ್ಧರಾಗಬೇಕು ಎಂದು ಉಡುಪಿ ಮಠದ ಪೇಜಾವರ ಶ್ರೀ ಹೇಳಿದರು.
ದಕ್ಷಿಣ ಕನ್ನಡ ವಿಶ್ವ ಹಿಂದೂ ಪರಿಷತ್ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಹಮ್ಮಿಕೊಂಡ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಹಮ್ಮಿಕೊಂಡ ಜನಾಗ್ರಹ ಸಭೆಯನ್ನುದ್ದೇಶಿ ಮಾತನಾಡುತ್ತಿದ್ದರು.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಲು ಪ್ರಧಾನಿ ದೃಢ ನಿರ್ಧಾರ ಮಾಡಬೇಕು. ಅದಕ್ಕಾಗಿ ಸಂಸತ್ ಜಂಟಿ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಬೇಕು. ಸುಗ್ರಿವಾಜ್ಞೆಯ ಮೂಲಕ ಈ ವರ್ಷವೇ ಮಾಡಬೇಕಾಗಿದೆ. ರಾಮಮಂದಿರ ನಿರ್ಮಾಣವಾಗುವುದಾದರೆ ನ್ಯಾಯಾಲಯದ ಹೊರಗೆ ಸಂಧಾನಕ್ಕೂ ಸಿದ್ಧರಾಗಿದ್ದೇವೆ. ಕಳೆದ ನಾಲ್ಕೂವರೆ ವರ್ಷದಲ್ಲಿ ಮಂದಿರ ನಿರ್ಮಾಣ ಮಾಡದೆ ಇರುವ ಕಾರಣ ಈ ಹೋರಾಟ ಅನಿವಾರ್ಯವಾಗಿದೆ ಎಂದು ಪೇಜಾವರ ಶ್ರೀ ತಿಳಿಸಿದ್ದಾರೆ.