ಕರ್ನಾಟಕಕ್ಕೆ ಜಾಫರ್ ಶರೀಫ್ ನೀಡಿದ ಕೊಡುಗೆ ಸದಾ ಸ್ಮರಣೀಯ: ಮಾಜಿ ಸಿಎಂ ಸಿದ್ದರಾಮಯ್ಯ

Update: 2018-11-25 14:47 GMT

ಬೆಂಗಳೂರು, ನ. 25: ಹಿರಿಯ ರಾಜಕೀಯ ಮುತ್ಸದ್ಧಿ, ಕೇಂದ್ರದ ಮಾಜಿ ಸಚಿವ ಸಿ.ಕೆ.ಜಾಫರ್ ಶರೀಫ್ ಅವರ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.

ಶರೀಫ್ ಅವರ ನಿಧನಕ್ಕೆ ಅತೀವ ಸಂತಾಪ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಸಾಮಾನ್ಯ ಕುಟುಂಬದಲ್ಲಿ ಹುಟ್ಟಿ, ಸ್ವಪ್ರಯತ್ನದಿಂದ ರಾಷ್ಟ್ರರಾಜಕಾರಣದ ಪ್ರಮುಖ ನಾಯಕರಾಗಿ ಶರೀಫ್ ಬೆಳೆದಿದ್ದರು ಎಂದು ಸ್ಮರಿಸಿದ್ದಾರೆ.

ರೈಲ್ವೆ ಸಚಿವರಾಗಿ ಕರ್ನಾಟಕ ರಾಜ್ಯಕ್ಕೆ ಜಾಫರ್ ಶರೀಫ್ ಅವರು ನೀಡಿದ ಕೊಡುಗೆ ಸದಾ ಸ್ಮರಣೀಯ. ಅವರ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ. ಅವರ ಅಗಲಿಕೆಯ ದುಃಖವನ್ನು ತಡೆದುಕೊಳ್ಳುವ ಶಕ್ತಿ ದೇವರು ಅವರ ಕುಟುಂಬದ ಸದಸ್ಯರಿಗೆ ಕರುಣಿಸಲಿ ಎಂದು ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News