ಛತ್ತೀಸ್ ಗಢದಲ್ಲಿ 9 ಮಾವೋವಾದಿಗಳ ಹತ್ಯೆ

Update: 2018-11-26 08:28 GMT

ಛತ್ತೀಸ್ ಗಢ, ನ.26: ಇಲ್ಲಿನ ಸುಕ್ಮಾ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ 9 ಮಾವೋವಾದಿಗಳು ಮತ್ತು ಇಬ್ಬರು ಭದ್ರತಾ ಸಿಬ್ಬಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಕಿಸ್ತಾರಾಮ್ ಪೊಲೀಸ್ ಠಾಣಾ ವ್ಯಾಪ್ತಿಯ ಸಕ್ಲಾರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

“9 ಮಾವೋವಾದಿಗಳ ಮೃತದೇಹಗಳು ನಮಗೆ ಲಭಿಸಿದೆ. ಇನ್ನೂ ಹೆಚ್ಚಿನ ಮಾವೋವಾದಿಗಳು ಸಾವನ್ನಪ್ಪಿರುವ ಸಾಧ್ಯತೆಯಿದೆ” ಎಂದು ಪೊಲೀಸ್ ಅಧಿಕಾರಿ ಡಿ.ಎಂ. ಅವಸ್ತಿ ಹೇಳಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News