ದ.ಕ. ಜಿಲ್ಲಾ ಕಾಂಗ್ರೆಸ್‌ನಿಂದ ಇಂದು ಸಂಜೆ ಶ್ರದ್ಧಾಂಜಲಿ ಸಭೆ
Update: 2018-11-26 13:53 IST
ಮಂಗಳೂರು, ನ.26: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್ ಧುರೀಣರಾದ ಮಾಜಿ ಸಚಿವರಾದ ಸಿ.ಕೆ.ಜಾಫರ್ ಶರೀಫ್ ಹಾಗೂ ಅಂಬರೀಶ್ ಅವರಿಗೆ ಶ್ರದ್ಧಾಂಜಲಿ ಸಭೆಯು ಇಂದು (ನ.26) ಸಂಜೆ 4:10ಕ್ಕೆ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.