ಅಂಬರೀಶ್‌ರಿಗೆ ಗುಲಾಂ ನಬಿ ಆಝಾದ್ ಅಂತಿಮ ನಮನ
Update: 2018-11-26 14:49 IST
ಬೆಂಗಳೂರು, ನ.26: ಕಾಂಗ್ರೆಸ್ ನಾಯಕರಾದ ಗುಲಾಂ ನಬಿ ಆಝಾದ್ ಹಾಗೂ ಕೆ.ಸಿ. ವೇಣುಗೋಪಾಲ್ ಅವರು ಶನಿವಾರ ರಾತ್ರಿ ನಿಧನರಾದ ಖ್ಯಾತ ನಟ, ಮಾಜಿ ಸಚಿವ ಅಂಬರೀಷ್ ಅವರ ಅಂತಿಮ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರ ಸಂದೇಶದ ಪತ್ರವನ್ನು ಅಂಬರೀಶ್ ಪುತ್ರ ಅಭಿಷೇಕ್ ಗೌಡ ಅವರಿಗೆ ಹಸ್ತಾಂತರಿಸಲಾಯಿತು. ಬಳಿಕ ಆಝಾದ್ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿಯಾಗಿ ಚರ್ಚಿಸಿದರು. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.