×
Ad

ಜಾಫರ್ ಶರೀಫ್ ನಿಧನ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ನಷ್ಟ: ಮಲ್ಲಿಕಾರ್ಜುನ ಖರ್ಗೆ

Update: 2018-11-26 20:09 IST

ಬೆಂಗಳೂರು, ನ.26: ಕೇಂದ್ರದ ಮಾಜಿ ಸಚಿವ ಸಿ.ಕೆ.ಜಾಫರ್ ಶರೀಫ್ ಅವರ ನಿಧನದಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ನಷ್ಟವುಂಟಾಗಿದೆ ಎಂದು ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ನಗರದಲ್ಲಿ ಜಾಫರ್ ಶರೀಫ್ ಅವರ ಅಂತಿಮ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಇಂದಿರಾಗಾಂಧಿ, ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಹಾಗೂ ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿಯವರಿಗೆ ಜಾಫರ್ ಶರೀಫ್ ಆಪ್ತರಾಗಿದ್ದರು ಎಂದರು.

ಮೌಲಾನ ಅಬುಲ್ ಕಲಾಂ ಆಝಾದ್ ಅವರಿಗೆ ಸಂಬಂಧಿಸಿದ ಪುಸ್ತಕವನ್ನು ಬಿಡುಗಡೆ ಮಾಡುವ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ನೀಡಿದ್ದರು. ಆದರೆ, ಕಾರ್ಯಕ್ರಮಕ್ಕೆ ಮುಂಚಿತವಾಗಿ ಈ ರೀತಿ ಆಗುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News