ಚಿದಂಬರಂ ವಿಚಾರಣೆಗೆ ಅನುಮತಿ ಇದೆ: ಸಿಬಿಐ

Update: 2018-11-26 18:10 GMT

 ಹೊಸದಿಲ್ಲಿ, ನ. 26: ಏರ್‌ಸೆಲ್ ಮ್ಯಾಕ್ಸಿಸ್ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರ ವಿಚಾರಣೆ ನಡೆಸಲು ಕೇಂದ್ರ ಸರಕಾರ ಅನುಮತಿ ನೀಡಿದೆ ಎಂದು ಸಿಬಿಐ ಸೋಮವಾರ ದಿಲ್ಲಿ ನ್ಯಾಯಾಲಯಕ್ಕೆ ತಿಳಿಸಿದೆ.

ಜಾರಿ ನಿರ್ದೇಶನಾಲಯ ದಾಖಲಿಸಿದ ಪ್ರಕರಣದಲ್ಲಿ ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ವಿರುದ್ಧ ಹಣ ಅಕ್ರಮ ವರ್ಗಾವಣೆ ಮಾಡಿದ ಆರೋಪ ವ್ಯಕ್ತಪಡಿಸಲಾಗಿತ್ತು. ಈ ವರ್ಷ ಜುಲೈಯಲ್ಲಿ ಸಿಬಿಐ ಅವರ ವಿರುದ್ಧ ಆರೋಪ ಸಲ್ಲಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಇತರ ಆರೋಪಿಗಳ ವಿಚಾರಣೆಗೆ ಅನುಮತಿ ಪಡೆಯಲು ಎರಡು ವಾರಗಳ ಕಾಲಾವಕಾಶ ಬೇಕು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿತು.

ಈ ಮಧ್ಯೆ ಚಿದಂಬರಂ ಹಾಗೂ ಕಾರ್ತಿ ಚಿದಂಬರ್ ಬಂಧನಕ್ಕೆ ನೀಡಲಾಗಿರುವ ಮಧ್ಯಂತರ ರಕ್ಷಣೆಯನ್ನು ನ್ಯಾಯಾಲಯ ಡಿಸೆಂಬರ್ 18ರ ವರೆಗೆ ವಿಸ್ತರಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News