ಅಂಬರೀಷ್‌ಗೆ ಕಣ್ಣೀರ ವಿದಾಯ

Update: 2018-11-26 18:21 GMT

ಬೆಂಗಳೂರು: ನಾಡಿನ ಜನರ ಮೆಚ್ಚಿನ ನಟ ಹಾಗೂ ಮಾಜಿ ಸಚಿವ ಅಂಬರೀಷ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಗರದ ಕಂಠೀರವ ಸ್ಟುಡಿಯೊದಲ್ಲಿ ಸೋಮವಾರ ಸಂಜೆ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿತು. ಅಂಬರೀಷ್ ಪುತ್ರ ಅಭಿಷೇಕ್ ಅವರು ತಂದೆಯ ದೇಹವನ್ನು ಇರಿಸಿದ್ದ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಅಂಬರೀಷ್ ಅವರ ಪತ್ನಿ ಸುಮಲತಾ ಅವರ ಮಾರ್ಗದರ್ಶನದಲ್ಲಿ ಒಕ್ಕಲಿಗರ ಸಂಪ್ರದಾಯದಂತೆ ಅಭಿಷೇಕ್ ಹಾಗೂ ಕುಟುಂಬದವರು ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು. ಇದಕ್ಕೂ ಮೊದಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಡಿಸಿಎಂ ಜಿ.ಪರಮೇಶ್ವರ್, ಮಾಜಿ ಸಿಎಂಗಳಾದ ಎಸ್.ಎಂ.ಕೃಷ್ಣ, ಬಿ.ಎಸ್. ಯಡಿಯೂರಪ್ಪ, ಸಿದ್ದರಾಮಯ್ಯ, ಮಾಜಿ ಕೇಂದ್ರ ಗೃಹ ಸಚಿವ ಸುಶೀಲ್‌ಕುಮಾರ್ ಶಿಂಧೆ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಅನೇಕ ಗಣ್ಯರು ಅಂಬರೀಷ್ ಅವರಿಗೆ ಅಂತಿಮ ಗೌರವ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor