ಕುಂದಾಪುರ : ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು
Update: 2018-11-26 23:54 IST
ಕುಂದಾಪುರ, ನ.26: ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನ.26ರಂದು ಬೆಳಗ್ಗೆ ಅಸೋಡು ಗ್ರಾಮದ ತೋಟದ ಬೆಟ್ಟು ಎಂಬಲ್ಲಿ ನಡೆದಿದೆ.
ಮೃತರನ್ನು ತೋಟದ ಬೆಟ್ಟು ನಿವಾಸಿ ನಾರಾಯಣ ಮಡಿವಾಳ ಎಂಬವರ ಮಗ ದಿನಕರ ಮಡಿವಾಳ ಎಂದು ಗುರುತಿಸಲಾಗಿದೆ. ದನಗಳನ್ನು ಮೇಯಲು ಬಿಡಲು ಹೋದ ಇವರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಬಾವಿಯ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆನ್ನಲಾಗಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.