ನ.29 ರಿಂದ ಡಿಸೆಂಬರ್ 1ರ ವರೆಗೆ ‘ಬೆಂಗಳೂರು ಟೆಕ್ ಸಮ್ಮಿಟ್’

Update: 2018-11-27 14:12 GMT

ಬೆಂಗಳೂರು, ನ. 27: ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ ಸಂಯುಕ್ತಾಶ್ರಯದಲ್ಲಿ ನಗರದ ಅರಮನೆ ಮೈದಾನದಲ್ಲಿ ನ.29ರಿಂದ ಡಿ.1ರ ವರೆಗೆ ‘ಬೆಂಗಳೂರು ಟೆಕ್ ಸಮ್ಮಿಟ್’ ಏರ್ಪಡಿಸಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಸಮಾರಂಭ ಉದ್ಘಾಟಿಸಲಿದ್ದಾರೆ.

ನ.29ರ ಬೆಳಗ್ಗೆ 10ಗಂಟೆಗೆ ಆರಂಭವಾಗುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಕಾನೂನು ಮತ್ತು ನ್ಯಾಯ ಸಚಿವ ರವಿಶಂಕರ್ ಪ್ರಸಾದ್, ಸಂಪರ್ಕ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ಮನೋಜ್ ಸಿನ್ಹಾ, ಆಸ್ಟ್ರೇಲಿಯಾ ಕ್ವೀನ್ಸ್‌ಲ್ಯಾಂಡ್ ಪಾರ್ಲಿಮೆಂಟ್ ಕೇಟ್ ಜೋನ್ಸ್, ಜೆಕ್ ಗಣರಾಜ್ಯದ ಮಾರ್ಟಿನ್ ತಲ್ಪಾ ಪಾಲ್ಗೊಳ್ಳಲಿದ್ದಾರೆ.

ಸಮಾರಂಭದ ಗೌರವಾನ್ವಿತ ಅತಿಥಿಗಳಾಗಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವರಾದ ಆರ್.ವಿ.ದೇಶಪಾಂಡೆ, ಕೆ.ಜೆ.ಜಾರ್ಜ್, ಎನ್.ಹೆಚ್. ಶಿವಶಂಕರರೆಡ್ಡಿ, ಪ್ರಿಯಾಂಕ್ ಖರ್ಗೆ ಸೇರಿ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News