ಬೆಂಗಳೂರು: ಹಿರಿಯ ಪತ್ರಕರ್ತ ಗಂಗಾಧರ ಮೊದಲಿಯಾರ್ ಗೆ ಸನ್ಮಾನ
Update: 2018-11-27 21:58 IST
ಬೆಂಗಳೂರು, ನ.27: ಚಲನಚಿತ್ರ ‘ಸಿನಿಮಾ ಸಮಯ’ ಕೃತಿಗೆ ರಾಜ್ಯ ಪ್ರಶಸ್ತಿ ಸಂದಿರುವ ಹಿನ್ನೆಲೆ ಹಿರಿಯ ಪತ್ರಕರ್ತ ಗಂಗಾಧರ ಮೊದಲಿಯಾರ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳವಾರ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಉಪಾಧ್ಯಕ್ಷ ಪುಂಡಲೀಕ ಬಾಲೋಜಿ, ಖಜಾಂಚಿ ಡಾ.ಉಮೇಶ್ವರ್, ಸೇರಿದಂತೆ ಪ್ರಮುಖರಿದ್ದರು.