×
Ad

ಮಧ್ಯಪ್ರದೇಶ ಅಸೆಂಬ್ಲಿ ಚುನಾವಣೆ: ಮೂವರು ಅಧಿಕಾರಿಗಳು ಹೃದಯಾಘಾತಕ್ಕೆ ಬಲಿ

Update: 2018-11-28 12:59 IST

ಇಂದೋರ್, ನ.28: ತೀವ್ರ ಕುತೂಹಲ ಕೆರಳಿಸಿರುವ ಮಧ್ಯಪ್ರದೇಶದ 230 ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಬೆಳಗ್ಗೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಹಲವೆಡೆ ಮತಯಂತ್ರಗಳು ಕೈಕೊಟ್ಟ ಘಟನೆಗಳು ನಡೆದಿವೆ. ಈ ನಡುವೆ ಚುನಾವಣಾ ಕರ್ತವ್ಯನಿರತ ಮೂವರು ಅಧಿಕಾರಿಗಳು ಹೃದಯಾಘಾತದಿಂದ ಮೃತಪಟ್ಟಿರುವ ಬಗ್ಗೆಯೂ ವರದಿಯಾಗಿದೆ.

ಗುನಾದಲ್ಲಿ ಓರ್ವರು ಹಾಗೂ ಇಂದೋರ್‌ನಲ್ಲಿ ಇಬ್ಬರು ಅಧಿಕಾರಿಗಳು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದಲ್ಲಿ ಕೈಕೊಟ್ಟಿರುವ ಕನಿಷ್ಠ 250 ಎವಿಎಂಗಳು ಹಾಗೂ 14 ವಿವಿಪ್ಯಾಟ್ ಯಂತ್ರಗಳನ್ನು ಬದಲಿಸಲಾಗಿದೆ. ರಾಜ್ಯದಲ್ಲಿ ಶಾಂತಿಯುತ ಮತದಾನ ನಡೆಯಲು ಸುಮಾರು 1.80 ಲಕ್ಷ ಭದ್ರತಾ ಸಿಬ್ಬಂದಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ. ಆಡಳಿತಾರೂಢ ಬಿಜೆಪಿ ನಾಲ್ಕನೇ ಅವಧಿಗೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಕಾಂಗ್ರೆಸ್ ಒಂದು ಕಾಲ ತನ್ನ ಕೈಯಲ್ಲಿದ್ದ ರಾಜ್ಯವನ್ನು ವಶಪಡಿಸಿಕೊಳ್ಳುವ ವಿಶ್ವಾಸದಲ್ಲಿದೆ.

 10 ಗಂಟೆಯ ಸುಮಾರಿಗೆ ಶೇ.21 ರಷ್ಟು ಮತದಾನವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News