ಉಡುಪಿ: ನ.30ರಂದು ‘ಮಿನಿ ಉದ್ಯೋಗ ಮೇಳ’
ಉಡುಪಿ, ನ.28: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉಡುಪಿ ಇವರ ಜಂಟಿ ಆಶ್ರಯದಲ್ಲಿ ‘ಮಿನಿ ಉದ್ಯೋಗ ಮೇಳ’ವನ್ನು ನ.30ರಂದು ಬೆಳಗ್ಗೆ 10 ಗಂಟೆಗೆ ಮಣಿಪಾಲದ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ಉದ್ಯೋಗಮೇಳದಲ್ಲಿ ಕರ್ನಾಟಕ ಎಜನ್ಸೀಸ್, ಭಾರತ್ ಅಟೋ ಕಾರ್ಸ್, ಬಿಎಸ್‌ಎಲ್ ಇಂಡಿಯಾ, ಯುರೇಕಾ, ಪೋರ್ಬ್ಸ್, ದಿಯಾ ಸಾಫ್ಟ್‌ವೇರ್‌ನಂಥ ಕಂಪೆನಿಗಳು ಭಾಗವಹಿಸಲಿದ್ದು, ಎಸೆಸೆಲ್ಸಿ, ಪಿಯುಸಿ, ಪದವಿ, ಎಂಎಸ್‌ಸಿ, ಎಂಸಿಎ ಹಾಗೂ ಐಟಿಐ ಡಿಪ್ಲೋಮ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ಬಯೋಡಾಟಾ ಹಾಗೂ ಅಗತ್ಯ ದಾಖಲೆ ಹಾಗೂ ಆಧಾರ್ ಕಾರ್ಡ್‌ನೊಂದಿಗೆ ಉದ್ಯೋಗಮೇಳದಲ್ಲಿ ಬಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0820-2574869, 9945856670, 9480259790ನ್ನು ಸಂಪರ್ಕಿಸುವಂತೆ ಉಡುಪಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆ ತಿಳಿಸಿದೆ.