ರಾಜ್ಯ-ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕರಿಗೆ ಉಚಿತ ಬಸ್‌ಪಾಸ್
Update: 2018-11-29 23:27 IST
ಬೆಂಗಳೂರು, ನ.29: ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಪ್ರಾಥಮಿಕ ಮತ್ತು ಪ್ರೌಢಶಾಲಾ ನಿವೃತ್ತ ಶಿಕ್ಷಕರಿಗೆ ಉಚಿತ ಬಸ್‌ಪಾಸ್ ಸೌಲಭ್ಯ ನೀಡಲು ಕೆಎಸ್ಸಾರ್ಟಿಸಿ ಅನುಮತಿ ನೀಡಿದೆ.
ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಶಿಕ್ಷಕರ ಉಚಿತ ಬಸ್‌ಪಾಸ್ ವಿತರಣೆಗೆ ಅಗತ್ಯವಾದ ಅನುದಾನವನ್ನು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿಯಡಿ ಲಭ್ಯವಿರುವ ಅನುದಾನದಿಂದ ನೀಡಬೇಕೆಂಬ ಷರತ್ತುಗಳ ಅನ್ವಯ ಸಾರಿಗೆ ಸಂಸ್ಥೆ ಉಚಿತ ಬಸ್‌ಪಾಸ್ ಸೌಲಭ್ಯ ನೀಡಲಾಗುತ್ತಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.