ಕೆಪಿಎಸ್‌ಸಿ ಮೀಸಲಾತಿ: 1995ರ ಆದೇಶ ಪಾಲಿಸಲು ಸಿಎಂ ಕುಮಾರಸ್ವಾಮಿಗೆ ಸಿದ್ದರಾಮಯ್ಯ ಮನವಿ

Update: 2018-11-29 18:49 GMT

ಬೆಂಗಳೂರು, ನ.29: ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗಿಂತ ಹೆಚ್ಚಿನ ಅಂಕಗಳನ್ನು ಪಡೆದರೂ ಅವರನ್ನು ಮೀಸಲಾತಿಯಲ್ಲಿಯೇ ಪರಿಗಣಿಸಬೇಕೆಂದು ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದ್ದು, ಇದರಿಂದ, ಕೆಳ ವರ್ಗದವರಿಗೆ ಅನ್ಯಾಯವಾಗುತ್ತದೆ. ಹೀಗಾಗಿ, ಸರಕಾರಿ ಆದೇಶ 1995ರ ಪದ್ಧತಿಯನ್ನೇ ಮುಂದುವರೆಸಬೇಕೆಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ.

1995ರ ಪದ್ಧತಿಯನ್ನೆ 2015ರ ಗೆಜೆಟೆಡ್ ಪ್ರೊಬೇಷನರ್ಸ್‌ ಪರೀಕ್ಷೆಯ ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆಗೂ ಅನುಸರಿಸಬೇಕು. ಈ ಬಗ್ಗೆ ಸಂಬಂಧಿಸಿದವರಿಗೆ ಕೂಡಲೇ ಸೂಚನೆ ನೀಡಬೇಕು ಹಾಗೂ ಯಾವುದೇ ನೇಮಕಾತಿಗಳನ್ನು ಈ ಆದೇಶಕ್ಕೆ ವಿರುದ್ಧವಾಗಿ ಮಾಡಬಾರದಾಗಿ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಬೇಕೆಂದು ಸಿಎಂ ಎಚ್‌ಡಿಕೆ ಅವರಿಗೆ ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ.

ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚಿಸಿ, 1995ರ ಸರಕಾರಿ ಆದೇಶವನ್ನು ಎಲ್ಲ ಹುದ್ದೆಗಳ ಪೂರ್ವಭಾವಿ ಪರೀಕ್ಷೆ, ಮುಖ್ಯಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆಗೂ ಅನುಸರಿಸಲು ಆದೇಶ ಹೊರಡಿಸಲು ನಿರ್ಧರಿಸಲಾಗಿದೆ ಎಂಬ ಮಾಹಿತಿ ತಮಗೆ ಲಭಿಸಿದ್ದು, ಇದು ಸ್ವಾಗತಾರ್ಹ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News