ಬಸ್ ಢಿಕ್ಕಿ: ಬೈಕ್ ಸವಾರ ಮೃತ್ಯು

Update: 2018-11-30 16:18 GMT

ಶಂಕರನಾರಾಯಣ, ನ.30: ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರೊಬ್ಬರು ಮೃತಪಟ್ಟ ಘಟನೆ ಅಂಪಾರು ಗ್ರಾಮದ ಮೂಡುಬಗೆ ಎಂಬಲ್ಲಿ ಗುರುವಾರ ಸಂಜೆ  ನಡೆದಿದೆ.

ಮೃತರನ್ನು ತೀರ್ಥಹಳ್ಳಿಯ ಅಂತೋನಿ ಡಿಸೋಜ ಎಂದು ಗುರುತಿಸ ಲಾಗಿದೆ.

ಅಂಪಾರು ಕಡೆಯಿಂದ ಸಿದ್ದಾಪುರ ಕಡೆಗೆ ಹೋಗುತ್ತಿದ್ದ ದುರ್ಗಾಂಬ ಬಸ್, ಮುಂದಿನಿಂದ ಸಿದ್ದಾಪುರ ಕಡೆಗೆ ಹೋಗುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅಂತೋನಿ ಡಿಸೋಜ ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.

ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News