ಡಾ.ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣ: ಶೀಘ್ರ ಎಸ್‌ಐಟಿ ತನಿಖೆ ?

Update: 2018-12-01 13:10 GMT
ಡಾ.ಎಂ.ಎಂ.ಕಲಬುರ್ಗಿ

ಬೆಂಗಳೂರು, ಡಿ.1: ಸಂಶೋಧಕ, ವಿಚಾರವಾದಿ ಡಾ. ಎಂ.ಎಂ.ಕಲಬುರ್ಗಿ ಅವರ ಹತ್ಯೆ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ ರಚನೆಗೆ ಸಿದ್ಧತೆ ನಡೆದಿದ್ದು, ಶೀಘ್ರದಲ್ಲಿಯೇ ತನಿಖೆ ಇನ್ನಷ್ಟು ಚುರುಕುಗೊಳ್ಳಲಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತಂಡ ಪಟ್ಟಿ ಹಾಗೂ ವಿವರಗಳೊಂದಿಗೆ ಡಿಜಿ ಹಾಗೂ ಐಜಿ ಅವರನ್ನು ಭೇಟಿ ಮಾಡಿ ಈ ಬಗ್ಗೆ ಸಮಾಲೋಚನೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಟ್ ತನಿಖಾಧಿಕಾರಿಗಳು, ಸೇರಿದಂತೆ ಇತರೆ ಪ್ರಮುಖ ಅಧಿಕಾರಿಗಳನ್ನು ತಂಡಕ್ಕೆ ಸೇರಿಸಲಾಗಿದೆ ಎಂದು ತಿಳಿದುಬಂದಿದೆ. ಡಾ.ಎಂ.ಎಂ.ಕಲಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆ ಬಗ್ಗೆ ಸುಪ್ರೀಂಕೋರ್ಟ್, ಸರಕಾರ ಹಾಗೂ ತನಿಖಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಎಸ್‌ಐಟಿಗೆ ವಹಿಸಲು ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

2015ರಂದು ಆಗಸ್ಟ್ 30 ರಂದು ಡಾ.ಎಂ.ಎಂ.ಕಲ್ಬುರ್ಗಿ ಅವರನ್ನು ದುಷ್ಕರ್ಮಿಗಳು ಪಿಸ್ತೂಲಿನಿಂದ ಗುಂಡಿಕ್ಕಿ ಹತ್ಯೆ ಮಾಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News