ಸಿದ್ದಗಂಗಾ ಶ್ರೀಗಳಿಗೆ ಜ್ವರ: ಆಸ್ಪತ್ರೆಗೆ ದಾಖಲು
Update: 2018-12-01 20:11 IST
ಬೆಂಗಳೂರು, ಡಿ.1: ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿರುವ ತುಮಕೂರಿನ ಸಿದ್ದಗಂಗಾ ಶಿವಕುಮಾರ ಸ್ವಾಮೀಜಿ ಅವರಿಗೆ ಜ್ವರದ ಕಾರಣ ಶನಿವಾರ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
111 ವರ್ಷದ ಶಿವಕುಮಾರ ಸ್ವಾಮೀಜಿ ಅವರಿಗೆ ಸಣ್ಣದಾಗಿ ಜ್ವರವಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ಅವರಿಗೆ ರಕ್ತಪರೀಕ್ಷೆ, ಅಲ್ಟ್ರಾಸೌಂಡ್ ಮತ್ತು ಕಿಬ್ಬೊಟ್ಟೆಯ ಸಿಟಿ ಸ್ಕ್ಯಾನ್ ಮಾಡಲಾಗುವುದು ಎಂದು ಆಸ್ಪತ್ರೆಯ ವೈದ್ಯರು ಮಾಧ್ಯಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಶಿವಕುಮಾರ ಸ್ವಾಮೀಜಿಗಳೊಂದಿಗೆ ಸಿದ್ಧಲಿಂಗಸ್ವಾಮೀಜಿ ಹಾಗೂ ಕಣ್ಣೂರು ಸ್ವಾಮೀಜಿ ಆಗಮಿಸಿದ್ದು, ಪೊಲೀಸ್ ಬೆಂಗಾವಲಿನಲ್ಲಿ ಆಸ್ಪತ್ರೆಗೆ ಕರೆ ತರಲಾಯಿತು. ರವಿವಾರ(ಡಿ.2) ಆಸ್ಪತ್ರೆಯಿಂದ ಮಠಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.