ಸಿಎಂ ಅಧ್ಯಕ್ಷತೆಯಲ್ಲಿ ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಸಭೆ

Update: 2018-12-01 18:48 GMT

ಚಾಮರಾಜನಗರ, ಡಿ.1: ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಪ್ರಾಧಿಕಾರದ ಸಭೆ ನಡೆಯಿತು.

ಪ್ರಾಧಿಕಾರದ ಉಪಾಧ್ಯಕ್ಷರಾಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಮತ್ತು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕ ಆರ್. ನರೇಂದ್ರ, ಸಾಲೂರು ಮಠದ ಗುರುಸ್ವಾಮಿಯವರು ಹಾಗೂ ಇತರರು ಕ್ಷೇತ್ರದ ಅಭಿವೃದ್ಧಿ ಸಂಬಂಧ ಮುಖ್ಯಮಂತ್ರಿಯವರೊಂದಿಗೆ ಸಭೆಯಲ್ಲಿ ಚರ್ಚಿಸಿದರು.

ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಪ್ರಾಧಿಕಾರದ ಕಾರ್ಯದರ್ಶಿಯಾಗಿರುವ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಅವರು ಕ್ಷೇತ್ರದ ಅಭಿವೃದ್ಧಿ ಸಂಬಂಧ ಮಾಹಿತಿ ನೀಡಿದರು.

ಸಭೆಯ ಬಳಿಕ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ನಡೆಸಿದ್ದು, ಜಿಲ್ಲಾ ಉಸ್ತುವಾರಿ ಸಚಿವರಾದ ಸಚಿವರಾದ ಸಿ. ಪುಟ್ಟರಂಗಶೆಟ್ಟಿ, ಲೋಕಸಭಾ ಸದಸ್ಯ ಆರ್. ಧ್ರುವನಾರಾಯಣ, ಶಾಸಕ ಆರ್. ನರೇಂದ್ರ ಅವರು ಸೇರಿದಂತೆ ಇತರರು ಜಿಲ್ಲಾ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿ ಸಂಬಂಧ ಹಲವು ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ ಎಂದರು.

ಜಿಲ್ಲೆಯ ಒಟ್ಟಾರೆ ಅಭಿವೃದ್ಧಿ ಹಾಗೂ ಮಹದೇಶ್ವರ ಬೆಟ್ಟ ಕ್ಷೇತ್ರದ ಭಕ್ತಾಧಿಗಳ ಅನುಕೂಲಕ್ಕಾಗಿ ಕಲ್ಪಿಸಬೇಕಿರುವ ಸೌಲಭ್ಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಜಿಲ್ಲೆ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆಗಬೇಕಿರುವ ಕೆಲಸಕಾರ್ಯಗಳ ಕುರಿತು ವರದಿ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಸಾಲೂರು ಮಠದ ಗುರುಸ್ವಾಮಿ, ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು. ಶಾಸಕರಾದ ಎನ್.ಮಹೇಶ್, ಸಿ.ಎಸ್. ನಿರಂಜನ್‍ ಕುಮಾರ್, ಕೆ.ಟಿ. ಶ್ರೀಕಂಠೇಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ ಕುಮಾರ್, ಉಪವಿಭಾಗಾಧಿಕಾರಿ ಫೌಜಿಯಾ ತರನ್ನುಮ್, ಪ್ರಾಧಿಕಾರದ ಸದಸ್ಯರಾದ ಕೆ. ಮಹದೇವ(ಕೊಪ್ಪಾಳಿ), ಡಿ. ದೇವರಾಜು, ಟಿ. ಮಹದೇವಪ್ಪ, ಜವರೇಗೌಡ, ಕಾವೇರಿಶಿವಕುಮಾರ್, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News