ಕತರ್ : ಕರ್ನಾಟಕ ಮುಸ್ಲಿಂ ಕಲ್ಚರಲ್ ಅಸೋಸಿಯೇಶನ್‌ನಿಂದ ಕನ್ನಡ ರಾಜ್ಯೋತ್ಸವ ಆಚರಣೆ

Update: 2018-12-02 12:03 GMT

ಕತರ್, ಡಿ.2: ದೋಹಾದ ಕರ್ನಾಟಕ ಮುಸ್ಲಿಂ ಕಲ್ಚರಲ್ ಅಸೋಸಿಯೇಶನ್(ಕೆಎಂಸಿಎ) ಹಾಗೂ ಮಂಗಳೂರಿನ ಸಾನಿಧ್ಯ ವಿಶೇಷ ಮಕ್ಕಳ ಶಾಲೆಯ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನ.22ರಂದು ದೋಹಾದ ಇಂಡಿಯನ್ ಕಲ್ಚರಲ್ ಸೆಂಟರ್‌ನಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಕರ್ನಾಟಕ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ಭಾಗವಹಿಸಿ ಮಾತನಾಡಿದರು.

ಇದೇ ಸಂದರ್ಭ ಬೆಳಪು ಗ್ರಾಪಂ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಹಾಗೂ ಸಾಮಾಜಿಕ ಕಾರ್ಯಕರ್ತ ಉಸ್ಮಾನ್ ಶೇಖ್ ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯ ಮೇಲೆ ಸಂಘದ ಅಧ್ಯಕ್ಷ ಇಬ್ರೀಝ್ ಖಾನ್, ಕಾರ್ಯದರ್ಶಿ ಖಲೀಲ್ ಅಹ್ಮದ್, ಮಾಜಿ ಅಧ್ಯಕ್ಷ ಅಬ್ದುಲ್ಲಾ ಮೋನು ಹಾಗೂ ರಾಯಭಾರ ಕಚೇರಿಯ ಅಸೀಂ ಅನ್ವರ್ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ಸಾನಿಧ್ಯ ವಿಶೇಷ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಚಂದ್ರಶೇಖರ್ ಅಂಗಡಿಯವರ ಹಾಸ್ಯ ಚಟಾಕಿ ಕಾರ್ಯಕ್ರಮ ಸಭಿಕರನ್ನು ರಂಜಿಸಿದವು.

ಮಂಜುನಾಥ್ ರಾವ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News