ಇರಾಪದವು : ಬೈಕ್‌ಗಳ ನಡುವೆ ಢಿಕ್ಕಿ; ಓರ್ವ ಮೃತ್ಯು, ಇಬ್ಬರಿಗೆ ಗಾಯ
Update: 2018-12-02 19:51 IST
ಬಂಟ್ವಾಳ, ಡಿ. 2: ಸ್ನೇಹಿತರ ಬೈಕ್‌ಗಳ ನಡುವೆ ಢಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಇರಾಪದವು ಎಂಬಲ್ಲಿ ರವಿವಾರ ಸಂಭವಿಸಿದೆ. ಬಂಟ್ವಾಳ ತಾಲೂಕಿನ ಇರಾ ನಿವಾಸಿ ಯೋಗೀಶ್ ಮೃತಪಟ್ಟ ಬೈಕ್ ಸವಾರ. ಈತನ ಸಹಸವಾರ ರವೀಶ್ ಹಾಗೂ ಇನ್ನೊಂದು ಬೈಕ್ ಸವಾರ ಗಣೇಶ್ ಗಾಯಗೊಂಡವರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಮೂವರು ಸ್ನೇಹಿತರು ಎರಡು ಬೈಕ್‌ನಲ್ಲಿ ಮುಡಿಪುವಿನಲ್ಲಿ ನಡೆಯುತ್ತಿದ್ದ ವಸ್ತುಪ್ರದರ್ಶನವನ್ನು ಮುಗಿಸಿ ಹಿಂದಿರುಗುವ ವೇಳೆ ಈ ಅಪಘಾತ ಸಂಭವಿಸಿದೆ. ಯೋಗಿಶ್ ಅವರ ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿದ್ದು, ಹಿಂಬದಿಯಲ್ಲಿದ್ದ ಸ್ನೇಹಿತ ಗಣೇಶ್ ಅವರ ಬೈಕ್ ಢಿಕ್ಕಿಯಾಗಿದೆ. ಪರಿಣಾಮ ಗಂಭೀರ ಗಾಯಗೊಂಡ ಯೋಗೀಶ್ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೋಲೀಸರು ತಿಳಿಸಿದ್ದಾರೆ. ಈ ಸಂಬಂಧ ಬಂಟ್ವಾಳ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.