ಎಸ್ಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ

Update: 2018-12-02 16:47 GMT

ಬೆಂಗಳೂರು, ಡಿ.2: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ರಾಜ್ಯದ ಎಸ್ಸಿ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರೋತ್ಸಾಹಧನ ಮಂಜೂರು ಮಾಡಲಾಗುತ್ತಿದೆ.

ಪ್ರಥಮ ಪ್ರಯತ್ನದಲ್ಲೇ ಶೇ.60ರಿಂದ 74.99 ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ 7ಸಾವಿರ ರೂ. ಹಾಗೂ ಶೇ.75 ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ 15ಸಾವಿರ ರೂ. ಮಂಜೂರು ಮಾಡಲಾಗುತ್ತದೆ.

ಪ್ರೋತ್ಸಾಹ ಧನ ಪಡೆಯಲು ತಮ್ಮ ಬ್ಯಾಂಕ್ ಖಾತೆ ಹಾಗೂ ಇತರ ವಿವರಗಳನ್ನು ವೆಬ್‌ಸೈಟ್ www.sw.kar.nic.in ನಲ್ಲಿ ಡಿ. 15ರೊಳಗೆ ನೋಂದಾಯಿಸಿಕೊಳ್ಳಬೇಕು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News