2002 ಗುಜರಾತ್ ಗಲಭೆ: ಝಾಕಿಯಾ ಜಾಫ್ರಿ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್
Update: 2018-12-03 13:13 IST
ಹೊಸದಿಲ್ಲಿ, ಡಿ.3: 2002ರ ಗೋಧ್ರಾ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಆಗಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಇತರ ಹಲವರನ್ನು ದೋಷಮುಕ್ತಗೊಳಿಸಿದ್ದನ್ನು ಪ್ರಶ್ನಿಸಿ ಝಾಕಿಯಾ ಜಾಫ್ರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ ಜನವರಿ ಮೂರನೇ ವಾರಕ್ಕೆ ಮುಂದೂಡಿದೆ.
ಝಾಕಿಯಾ ಜಾಫ್ರಿ ಕಾಂಗ್ರೆಸ್ ನಾಯಕ ಎಹ್ಸಾನ್ ಜಾಫ್ರಿಯವರ ಪತ್ನಿಯಾಗಿದ್ದಾರೆ. 2002ರ ಫೆ.28 ರಂದು ಅಹ್ಮದಾಬಾದ್‌ನ ಗುಲ್ಬರ್ಗ್ ಸೊಸೈಟಿ ಮೇಲೆ ದಾಳಿ ನಡೆಸಿದ್ದ ಗುಂಪು ಕಾಂಗ್ರೆಸ್ ನಾಯಕ ಎಹ್ಸಾನ್ ಜಾಫ್ರಿಯವರನ್ನು ಹತ್ಯೆಗೈದಿತ್ತು. ಜಾಫ್ರಿ ಅವರು 2017ರಲ್ಲಿ ಗುಜರಾತ್ ಹೈಕೋರ್ಟ್ ಗುಜರಾತ್ ಗಲಭೆ ಆರೋಪಿಗಳನ್ನು ದೋಷಮುಕ್ತಗೊಳಿಸಿದ್ದನ್ನು ಪ್ರಶ್ನಿಸಿ ನ್ಯಾಯಾಂಗ ಹೋರಾಟ ಮಾಡುತ್ತಿದ್ದಾರೆ.