×
Ad

​ಬಿಜೆಪಿಯವರಿಗೆ ‘ಆಪರೇಷನ್ ಕಮಲ’ ಹೊಸದೇನಲ್ಲ: ಮಾಜಿ ಸಚಿವ ಸತೀಶ್ ಜಾರಕಿಹೊಳಿ

Update: 2018-12-03 17:43 IST

ಬೆಳಗಾವಿ, ಡಿ. 3: ಬಿಜೆಪಿಯವರಿಗೆ ‘ಆಪರೇಷನ್ ಕಮಲ’ ಹೊಸದೇನಲ್ಲ. ರಾಜ್ಯದಲ್ಲಿ ಮೈತ್ರಿ ಸರಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಆಪರೇಷನ್ ಕಮಲ ಪ್ರಯತ್ನ ನಡೆಸಿದ್ದಾರೆ. ಆದರೆ, ಪಕ್ಷದ ಯಾವ ಶಾಸಕರು ಇದಕ್ಕೆ ಬಲಿಯಾಗುವುದಿಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಣೆ ನೀಡಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಕೆಲ ಶಾಸಕರಲ್ಲಿ ಅಸಮಾಧಾನ ಇರುವುದು ಸಹಜ. ಇದು ಎಲ್ಲ ಮುಖ್ಯಮಂತ್ರಿಗಳ ಅವಧಿಯಲ್ಲೂ ಇರುತ್ತದೆ. ಆದರೆ, ಸಿದ್ದರಾಮಯ್ಯರ ವಿರುದ್ಧ ಹೈಕಮಾಂಡ್‌ಗೆ ದೂರು ನೀಡುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.
ನಾನು ಯಾವುದೇ ಅತೃಪ್ತ ಶಾಸಕರ ಸಂಪರ್ಕದಲ್ಲಿ ಇಲ್ಲ. ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ, ಈಗಾಗಲೇ ನಮ್ಮ ಬೇಡಿಕೆಗಳನ್ನು ಹೈಕಮಾಂಡ್‌ಗೆ ತಿಳಿಸಿದ್ದೇವೆ. ಆದಷ್ಟು ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಮಾಡಿದರೆ ಒಳ್ಳೆಯದು ಎಂದು ಮನವಿ ಮಾಡಿದ್ದು, ವಿಸ್ತರಣೆ ಭರವಸೆ ನೀಡಿದ್ದಾರೆ ಎಂದರು.

ಸಚಿವ ಸಂಪುಟ ವಿಸ್ತರಣೆ ಮಾಡುವುದರಿಂದ ಸರಕಾರದ ಆಡಳಿತ ಸುಗಮವಾಗಿ ನಡೆಸಲು ಸಾಧ್ಯವಾಗುತ್ತದೆ ಎಂದ ಸತೀಶ್ ಜಾರಕಿಹೊಳಿ, ಯಾವುದೇ ಶಾಸಕರನ್ನು ನಾನು ಎಲ್ಲಿಗೂ ಕರೆದೊಯ್ಯುವುದಿಲ್ಲ ಎಂದು ರಮೇಶ್ ಜಾರಕಿಹೊಳಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News