ಡಿ.8ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

Update: 2018-12-03 12:54 GMT

ಬೆಂಗಳೂರು, ಡಿ. 3: ಮಾಜಿ ಮುಖ್ಯಮಂತ್ರಿ, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಡಿ.8ರಂದು ನಗರದ ಖಾಸಗಿ ಹೊಟೇಲ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ವಿಶೇಷ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

ಡಿ.8ರ ಸಂಜೆ 5ಗಂಟೆಗೆ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಬಿ.ಖಂಡ್ರೆ ಭಾಗವಹಿಸಲಿದ್ದು, ಎಲ್ಲ ಶಾಸಕರು ಸಭೆಯಲ್ಲಿ ತಪ್ಪದೆ ಹಾಜರಾಗಿ ತಮ್ಮ ಅಮೂಲ್ಯ ಸಲಹೆಗಳನ್ನು ನೀಡಬೇಕೆಂದು ಮಾಜಿ ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News