×
Ad

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ಶೀಘ್ರ ವಿಮಾನ ಹಾರಾಟ: ಕೇಂದ್ರ ಸಚಿವ ಜಯಂತ್ ಸಿನ್ಹಾ

Update: 2018-12-03 18:44 IST

ಬೆಳಗಾವಿ, ಡಿ.3: ಕೇಂದ್ರ ಸರಕಾರದ ಉಡಾನ್ ಯೋಜನೆಯಡಿ ಸಾಂಬ್ರಾ ವಿಮಾನ ನಿಲ್ದಾಣದಿಂದ ದೇಶದ ವಿವಿಧ ಭಾಗಗಳಿಗೆ ವಿಮಾನಗಳ ಹಾರಾಟವನ್ನು ಶೀಘ್ರವೆ ಆರಂಭಿಸಲಾಗುವುದು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜಯಂತ್ ಸಿನ್ಹಾ ಭರವಸೆ ನೀಡಿದರು.

ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ದೇಶದ ಅನೇಕ ವಿಮಾನಯಾನ ಸಂಸ್ಥೆಗಳು ಬೆಳಗಾವಿ ವಿಮಾನ ನಿಲ್ದಾಣದ ಮೂಲಕ ವಿಮಾನ ಹಾರಾಟ ಆರಂಭಿಸಲು ಆಸಕ್ತಿ ತೋರಿಸಿವೆ. ಹೀಗಾಗಿ ಪ್ರತಿದಿನ 10ರಿಂದ 15ವಿಮಾನಗಳ ಹಾರಾಟವನ್ನು ಆರಂಭಿಸಲಾಗುವುದು ಎಂದರು.

ಸಂಸದ ಸುರೇಶ ಅಂಗಡಿ ಅವರು, ಬೆಳಗಾವಿಯಿಂದ ಕಾರ್ಗೋ ಸೇವೆ ಮತ್ತು ಅಂತರ್‌ರಾಷ್ಟ್ರೀಯ ಮಟ್ಟದ ವಿಮಾನಗಳ ಸೇವೆ ಆರಂಭಿಸುವಂತೆ ಸಚಿವರಲ್ಲಿ ಮನವಿ ಮಾಡಿದರು. ಅಲ್ಲದೇ ಬೆಳಗಾವಿಯಲ್ಲಿ ವಿಮಾನ ಹಾರಾಟ ತರಬೇತಿ ಶಾಲೆ ಆರಂಭಿಸುವಂತೆ ಕೋರಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಈ ಕುರಿತು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News