×
Ad

ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Update: 2018-12-03 20:07 IST

ಉಡುಪಿ, ಡಿ.3: ವ್ಯಕ್ತಿಯ ಪರಿಪೂರ್ಣ ಬೆಳವಣಿಗೆಗೆ ಕ್ರೀಡೆ ಅತಿ ಅಗತ್ಯ ವಾಗಿದ್ದು, ಅದರಲ್ಲೂ ಪೊಲೀಸ್ ಇಲಾಖೆಗೆ ಮುಖ್ಯವಾಗಿದೆ. ಈ ಮೂಲಕ ಕ್ರೀಡಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧು ಬಿ.ರೂಪೇಶ್ ಹೇಳಿದ್ದಾರೆ.

ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ಆಯೋಜಿ ಸಲಾದ ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡುತಿದ್ದರು.

ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಕುಂದಾಪುರ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್, ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಟಿ.ಭೂಬಾಲನ್ ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಯೋಗೇಶ್ ನಾಯ್ಕಿ ಕ್ರೀಡಾ ಜ್ಯೋತಿ ಬೆಳ ಗಿಸಿದರು. ಡಿಎಆರ್‌ನ ಮೀಸಲು ಉಪನಿರೀಕ್ಷಕ ಸಹದೇವ ಎಸ್.ಯಮ್ಮೋಜಿ ಪ್ರಮಾಣ ವಚನ ಬೋಧಿಸಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ್ ಬ.ನಿಂಬರ್ಗಿ ಸ್ವಾಗತಿಸಿದರು. ಹೆಚ್ಚು ವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ವಂದಿಸಿದರು. ಬಿ.ಮನಮೋಹನ್ ರಾವ್ ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾಕೂಟದಲ್ಲಿ ಉಡುಪಿ, ಕುಂದಾ ಪುರ, ಕಾರ್ಕಳ ಉಪವಿಭಾಗ, ಜಿಲ್ಲಾ ಶಸ್ತ್ರ ಮೀಸಲು ಪಡೆ, ಮಹಿಳಾ ವಿಭಾಗ ಹಾಗೂ ಜಿಲ್ಲಾ ಪೊಲೀಸ್ ಕಚೇರಿ ವಿಭಾಗಳ ತಂಡಗಳು ಭಾಗವಹಿಸಿದ್ದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News