×
Ad

ಅಜ್ಜರಕಾಡು ಪಾರ್ಕ್‌ನಲ್ಲಿ ಸಲಿಂಗ ಕಾಮಿಗಳ ಹಾವಳಿ: ಕ್ರಮಕ್ಕೆ ಮನವಿ

Update: 2018-12-03 20:08 IST

ಉಡುಪಿ, ಡಿ.3: ನಗರದ ಅಜ್ಜರಕಾಡು ಭುಜಂಗ ಪಾರ್ಕ್‌ನಲ್ಲಿ ಸಲಿಂಗ ಕಾಮಿಗಳ ಹಾವಳಿ ಹೆಚ್ಚಾಗಿದ್ದು, ಇದರ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿ ಸುವಂತೆ ಉಡುಪಿ ಜಿಲ್ಲಾ ನಾಗರಿಕ ಸಮಿತಿಯು ಇಂದು ಉಡುಪಿ ನಗರ ಠಾಣೆಗೆ ಮನವಿ ಸಲ್ಲಿಸಿತು.

ಮುಗ್ದ ಮಕ್ಕಳನ್ನು ಆಮಿಷಗಳ ಮೂಲಕ ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಘಟನೆಗಳು ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಮುಜುಗರದ ಕಾರಣದಿಂದ ಯಾರು ಕೂಡ ಪೊಲೀಸ್ ಠಾಣೆಗೆ ದೂರು ನೀಡುತ್ತಿಲ್ಲ. ಶಾಲಾ ವಿದ್ಯಾರ್ಥಿಗಳ, ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆಯುವುದರಿಂದ ಅವರು ಮಾನಸಿಕವಾಗಿ ಕುಗ್ಗಿ, ಶಿಕ್ಷಣದಿಂದ ಹಿಂದೆ ಉಳಿಯಬಹುದು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಇದರಿಂದ ಮಕ್ಕಳು ಮಾರಕ ಕಾಯಿಲೆಗಳ ಸೊಂಕಿತರಾಗಲು ಸಾಧ್ಯತೆ ಇರುತ್ತದೆ. ಆದುದರಿಂದ ಮಕ್ಕಳ ಹಿತದೃಷ್ಟಿಯಿಂದ ಅಜ್ಜರಕಾಡು ಭುಜಂಗ ಪಾರ್ಕಿನಲ್ಲಿ ಪೊಲೀಸ್ ಗಸ್ತು ನಿಯೋಜಿಸಬೇಕೆಂದು ಸಮಿತಿ, ಮನವಿಯಲ್ಲಿ ಒತ್ತಾಯಿಸಿದೆ. ಮನವಿಯನ್ನು ನಗರ ಠಾಣಾಧಿಕಾರಿ ಎ.ವಿ. ಅನಂತ ಪದ್ಮನಾಭ ಸ್ವೀಕರಿಸಿದರು.

ಈ ಸಂದರ್ಭ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಒಳಕಾಡು, ಸದಸ್ಯರಾದ ತಾರಾನಾಥ್ ಮೇಸ್ತ ಶಿರೂರು, ವಿನಯಚಂದ್ರ ಸಾಸ್ತಾನ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News