×
Ad

ಶಾಸಕ ಭೈರತಿ ಬಸವರಾಜ್ ಸಲ್ಲಿಸಿದ್ದ ನಾಮಪತ್ರದಲ್ಲಿ ಸುಳ್ಳು ಮಾಹಿತಿ ಆರೋಪ: ಸಾಕ್ಷ ವಿಚಾರಣೆ ನಡೆಸಲು ಹೈಕೋರ್ಟ್ ಆದೇಶ

Update: 2018-12-03 21:36 IST

ಬೆಂಗಳೂರು, ಡಿ.3: ಕೆ.ಆರ್.ಪುರಂ ಶಾಸಕ ಭೈರತಿ ಬಸವರಾಜ್ ಅವರು ತಮ್ಮ ವಿರುದ್ಧ ಶಾಸಕತ್ವ ಅನರ್ಹತೆ ಕೋರಿ ದಾಖಲಾಗಿರುವ ತಕರಾರು ಅರ್ಜಿ ವಜಾಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಕೆ.ಆರ್.ಪುರಂ ವಿಧಾನ ಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ನಂದೀಶ್‌ ರೆಡ್ಡಿ, ಶಾಸಕ ಭೈರತಿ ಬಸವರಾಜ್ ಅವರು ವಿಧಾನಸಭೆ ಸಾರ್ವತ್ರಿಕ ಚುನಾವಣೆ ವೇಳೆಯಲ್ಲಿ ನಾಮಪತ್ರವನ್ನು ಸಲ್ಲಿಸುವಾಗ ತಮ್ಮ ಆಸ್ತಿ ವಿವರ ಹಾಗೂ ವಿದ್ಯಾರ್ಹತೆ ಬಗ್ಗೆ ಸುಳ್ಳು ಮಾಹಿತಿಯನ್ನು ನೀಡಿದ್ದಾರೆ. ಹೀಗಾಗಿ, ಭೈರತಿ ಅವರ ಶಾಸಕತ್ವವನ್ನು ಅನರ್ಹಗೊಳಿಸಬೇಕೆಂದು ತಕರಾರು ಅರ್ಜಿ ಸಲ್ಲಿಸಿದ್ದರು. ಆದರೆ, ಭೈರತಿ ಬಸವರಾಜ್ ಅವರು ನಂದೀಶ್‌ ರೆಡ್ಡಿ ಅವರ ತಕರಾರು ಅರ್ಜಿ ವಜಾಕೋರಿ ಅರ್ಜಿ ಸಲ್ಲಿಸಿದ್ದರು. ನ್ಯಾಯಪೀಠವು ವಕೀಲರ ವಾದವನ್ನು ಆಲಿಸಿ ಭೈರತಿ ಅವರ ವಿಚಾರಣೆ ಮನವಿಯನ್ನು ತಿರಸ್ಕರಿಸಿ ಸಾಕ್ಷ ವಿಚಾರಣೆ ನಡೆಸಲು ಆದೇಶಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News