×
Ad

ಡಿ.8: ಪ್ರಬಂಧ ಸ್ಪರ್ಧೆಯ ಪ್ರಮಾಣ ಪತ್ರ ವಿತರಣೆ

Update: 2018-12-03 22:13 IST

ಉಡುಪಿ, ಡಿ.3: ಬೊಳುವಾರು ಅವರ ‘ಪಾಪು ಗಾಂಧಿ, ಗಾಂಧಿ ಬಾಪು ಆದ ಕತೆ’ ಹಾಗೂ ಡಾ.ಮಹಾಬಲೇಶ್ವರ ರಾವ್ ಅವರ ‘ಬರಿಯ ಬಟ್ಟೆಯಲ್ಲ ಭಾರತದ ಬಾವುಟ’ ಕೃತಿಗಳ ಕುರಿತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ಉತ್ತಮ ನಿರ್ವಹಣೆ ತೋರಿಸಿದವರಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಡಿ.8ರಂದು ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.

ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ ಹಾಗೂ ಎಂಜಿಎಂ ಕಾಲೇಜಿನ ಗಾಂಧಿ ಅಧ್ಯಯನ ಕೇಂದ್ರಗಳ ಜಂಟಿ ಆಶ್ರಯದಲ್ಲಿ ಬೆಳಗ್ಗೆ 10 ಗಂಟೆಗೆ ಪ್ರಾರಂಭ ಗೊಳ್ಳುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಂಡಿಕೇಟ್ ಬ್ಯಾಂಕಿನ ಮಾಜಿ ಅಧ್ಯಕ್ಷ ಹಾಗೂ ಆಡಳಿತ ನಿರ್ದೇಶಕ ಡಾ.ಎನ್.ಕೆ.ತಿಂಗಳಾಯ ವಹಿಸಲಿದ್ದಾರೆ. ಗಾಂಧಿ ಅಧ್ಯಯನ ಕೇಂದ್ರದ ಸಂಚಾಲಕ ವಿನೀತ್ ರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಬಿವಿಟಿಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News