ಡಿ.9: ಕಾಲೇಜು ವಿದ್ಯಾರ್ಥಿಗಳಿಗೆ ಪೈಂಟಿಂಗ್ ಸ್ಪರ್ಧೆ
Update: 2018-12-04 20:29 IST
ಮಂಗಳೂರು, ಡಿ.4: ಕರಾವಳಿ ಕರ್ನಾಟಕ ಜನಾಭಿವೃದ್ಧಿ ವೇದಿಕೆಯ ಆಶ್ರಯದಲ್ಲಿ ಮಂಗಳೂರಿನ ಕಾಲೇಜು ವಿದ್ಯಾರ್ಥಿಗಳಿಗಾಗಿ ‘ಭೋಪಾಲ ಅನಿಲ ದುರಂತದಿಂದ ಮಂಗಳೂರು ಕಲಿಯಬೇಕಾದ ಪಾಠಗಳು’ ವಿಷಯದಲ್ಲಿ ಪೈಂಟಿಂಗ್ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಡಿ.9ರಂದು ಬೆಳಗ್ಗೆ 10 ಗಂಟೆಗೆ ನಗರದ ಕದ್ರಿ ಪಾರ್ಕ್‌ನಲ್ಲಿ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯಲ್ಲಿ ಉತ್ತಮವಾದ ಮೂರು ಕೃತಿಗಳಿಗೆ ಬಹುಮಾನವಿದೆ. ಭಾಗವಹಿಸಲು ಇಚ್ಛಿಸುವ ವಿದ್ಯಾರ್ಥಿಗಳು 9481900263, 9008675373ನ್ನು ಸಂಪರ್ಕಿಸಬಹುದಾಗಿದೆ ಎಂದು ಕರಾವಳಿ ಕರ್ನಾಟಕ ಜನಾಭಿವೃದ್ಧಿ ವೇದಿಕೆಯ ಶಬೀರ್ ಅಹ್ಮದ್ ಪ್ರಕಟನೆಯಲ್ಲಿ ತಿಳಿಸಿದರು.