ಡಿ.6ರಂದು ಮಸ್ಜಿದ್ ಝೀನತ್ ಬಕ್ಷ್ ನಲ್ಲಿ ಮೌಲೂದ್ ಪಾರಾಯಣ
Update: 2018-12-04 20:56 IST
ಮಂಗಳೂರು, ಡಿ. 4: ಮೀಲಾದುನ್ನಬಿ ಪ್ರಯುಕ್ತ ನಗರದ ಮಸ್ಜಿದ್ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿಯಲ್ಲಿ ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ನೇತೃತ್ವದಲ್ಲಿ ಮೌಲೂದ್ ಪಾರಾಯಣವನ್ನು ಡಿ. 6ರಂದು ಮಗ್ರಿಬ್ ನಮಾಝಿನ ಬಳಿಕ ಹಮ್ಮಿಕೊಳ್ಳಲಾಗಿದೆ ಎಂದು ಮಸ್ಜಿದ್ ಝೀನತ್ ಬಕ್ಷ್ ಹಾಗೂ ಈದ್ಗಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಹಾಝಿ ಮುಹಮ್ಮದ್ ಹನೀಫ್ ಪ್ರಕಟನೆಯಲ್ಲಿ ತಿಳಿಸಿದರು.