ಆ್ಯಂಬಿಡೆಂಟ್ ವಂಚನೆ ಪ್ರಕರಣ: ಜನಾರ್ದನರೆಡ್ಡಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ
Update: 2018-12-04 21:12 IST
ಬೆಂಗಳೂರು, ಡಿ.4: ಆ್ಯಂಬಿಡೆಂಟ್ ಕಂಪೆನಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನರೆಡ್ಡಿ ಮತ್ತು ಅಲಿಖಾನ್ ವಿರುದ್ಧ ಮುಂದಿನ ವಿಚಾರಣೆವರೆಗೂ ಬಲವಂತವಾಗಿ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸಿಸಿಬಿ ಪೊಲೀಸರಿಗೆ ಸೂಚನೆ ನೀಡಿದೆ.
ತಮ್ಮನ್ನು ಆರೋಪದಿಂದ ಮುಕ್ತಗೊಳಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ನ್ಯಾಯಪೀಠ, ಈ ಸೂಚನೆ ನೀಡಿದೆ.
ಜನಾರ್ದನರೆಡ್ಡಿ ಅವರು ಆ್ಯಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದರು. ಜಾಮೀನಿನ ಮೇಲೆ ಅವರು ಬಿಡುಗಡೆಯಾಗಿದ್ದಾರೆ. ಸಿಸಿಬಿ ಪೊಲೀಸರು ವಂಚನೆ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದಾರೆ.