ಅಯೋಧ್ಯೆಯಲ್ಲಿ ಮಂದಿರ-ಮಸೀದಿ ಬೇಡ, ರಾಷ್ಟ್ರೀಯ ಉದ್ಯಾನವನ ನಿರ್ಮಾಣ ಮಾಡಲಿ: ಪ್ರೊ.ಕೆ.ಎಸ್.ಭಗವಾನ್

Update: 2018-12-05 14:27 GMT

ಮೈಸೂರು,ಡಿ.5: ಅಯೋಧ್ಯೆಯಲ್ಲಿ ಮಂದಿರವೂ ಬೇಡ, ಮಸೀದಿಯೂ ಬೇಡ. ಆ ಸ್ಥಳದಲ್ಲಿ ರಾಷ್ಟ್ರೀಯ ಉದ್ಯಾನವನ ನಿರ್ಮಾಣ ಮಾಡಲಿ ಎಂದು ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್ ಭಗವಾನ್ ಅಭಿಪ್ರಾಯಿಸಿದರು.

ನಗರದ ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಸಮಾಧಿಗೆ, ನಾಲ್ವಡಿ ಕೃಷ್ಣರಾಜ ಒಡೆಯರ್ ಜಾರಿಗೆ ತಂದ ಮೀಸಲಾತಿಗೆ 100 ವರ್ಷವಾದ ಹಿನ್ನೆಲೆ ಬುಧವಾರ ವಿವಿಧ ಪ್ರಗತಿಪರ ಸಂಘಟನೆಗಳೊಂದಿಗೆ ಪುಷ್ಪಾರ್ಚನೆ ಮಾಡಿ ಮೌನ ಪ್ರತಿಭಟನೆಯಲ್ಲಿ ಪಾಲ್ಗೊಂಡು ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಆ ಜಾಗದಲ್ಲಿ ಯಾವುದೇ ಮಂದಿರ ಮತ್ತು ಮಸೀದಿ ನಿರ್ಮಾಣ ಮಾಡಿದರೆ ಶಾಂತಿ ಕದಡುತ್ತದೆ. ಈ ಜಾಗದ ವಿಚಾರ ರಾಜಕೀಯ ತಿರುವು ಪಡೆದುಕೊಳ್ಳುತ್ತದೆ. ಹೀಗಾಗಿ ಅಲ್ಲಿ ಆ ಸ್ಥಳದಲ್ಲಿ ರಾಷ್ಟ್ರೀಯ ಉದ್ಯಾನವನ ನಿರ್ಮಾಣ ಮಾಡಲಿ. ಅದನ್ನು ರಾಷ್ಟ್ರೀಯ ಆಸ್ತಿ ಎಂದು ಸರ್ಕಾರ ಘೋಷಣೆ ಮಾಡಲಿ ಎಂದು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News