ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ
Update: 2018-12-05 20:10 IST
ಬೆಂಗಳೂರು, ಡಿ.5: ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.
ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದ ಆರ್.ವಿನೋತ್ ಪ್ರಿಯಾರನ್ನು ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧಿಕಾರಿಯನ್ನಾಗಿ ಹಾಗೂ ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಆರ್.ಗಿರೀಶ್ ಅವರನ್ನು ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಡಿ.ರಣದೀಪ್‌ರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ(ಆಡಳಿತ)ರನ್ನಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.