×
Ad

ಪ್ರತಿ ಬೂತ್‌ನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ: ಎಡಿಸಿ

Update: 2018-12-05 21:46 IST

ಉಡುಪಿ, ಡಿ.5: ಮುಂದಿನ ಜ.25ರಂದು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದ ಪ್ರತಿ ಮತಗಟ್ಟೆಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಮತದಾನದ ಪ್ರಾವಿತ್ರತೆ ಹಾಗೂ ಮಹತ್ವ ಕುರಿತಂತೆ ನಾಗರಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ತಿಳಿಸಿದ್ದಾರೆ.

ಬುಧವಾರ, ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮತದಾರರ ನೊಂದಣಿ ಸೇರಿದಂತೆ, ಚುನಾವಣಾ ಪ್ರಕ್ರಿಯೆಯಲ್ಲಿ ಪ್ರತಿ ಯೊಬ್ಬರು ಹೆಚ್ಚಿನಸಂಖ್ಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಉತ್ತೇಜಿಸಲು, ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿ ಮಾಡಲು ಮತದಾರರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲೂಕು ಮಟ್ಟದಲ್ಲೂ ಸಹ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಪ್ರತಿ ವಿಧಾನಸಭಾ ಕ್ಷೇತ್ರದ ಎಲ್ಲಾ ಮತಗಟ್ಟೆಗಳಲ್ಲಿ ಬಿಎಲ್‌ಓಗಳ ಮೂಲಕ ಕಾರ್ಯಕ್ರಮ ಆಯೋಜಿಸುವಂತೆ ಎಲ್ಲಾ ತಹಶೀಲ್ದಾರ್‌ಗಳಿಗೆ ಅಪರ ಜಿಲ್ಲಾಧಿಕಾರಿ ಸೂಚಿಸಿದರು.

ಮತದಾರರ ದಿನದ ಅಂಗವಾಗಿ ಸ್ವೀಪ್ ಸಮಿತಿ ವತಿಯಿಂದ ಜಿಲ್ಲೆಯ ಎಲ್ಲಾ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಮತ್ತು ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪ್ರಬಂಧ ಮತ್ತು ಕ್ವಿಜ್ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸುವಂತೆ ಹಾಗೂ ಮತದಾರರ ದಿನದಂದು ಎಲ್ಲಾ ಕಾಲೇಜು ವಿದ್ಯಾರ್ಥಿ ಗಳಿಂದ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ ನಡೆಸುವಂತೆ ಸೂಚಿಸಿದರು.

ಸಭೆಯಲ್ಲಿ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಭೂಬಾಲನ್, ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಹಾಗೂ ವಿವಿಧ ಇಲಾಖೆ ಳ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News